ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಹಾಗೂ ಸಚಿವ ಸಂಪುಟ ಪುನಾರಚನೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಂಪುಟ ಪುನಾರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾರೆ. ಈ ಬಗ್ಗೆ ಅವರು ಹೇಳಿಕೆ ಕೊಡುತ್ತಾರೆ ಎಂದಿದ್ದಾರೆ.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ವಿಚಾರವಾಗಿ, ಸಿಎಂ ದೆಹಲಿಗೆ ತೆರಳಲಿದ್ದಾರೆ. ಏನೇ ಕೆಲಸವಿದ್ದರೂ ನಾವು ದೆಹಲಿಗೆ ಹೋಗುತ್ತೇವೆ. ಹೈಕಮಾಂಡ್ ಭೇಟಿಗೂ ಹೋಗುತ್ತೇವೆ. ವರಿಷ್ಠರು ಕರೆದಾಗಲೂ ಹೋಗುತ್ತೇವೆ. ಕೆಲಸ ವಿದಾಗ ಹೋಗುತ್ತೇವೆ. ವಿಶ್ರಾಂತಿ ಪಡೆಯಲೂ ಹೋಗುತ್ತೇವೆ, ಶಾಪಿಂಗ್ ಮಾಡಲೂ ದೆಹಲಿಗೆ ಹೋಗುತ್ತೇವೆ ಎಂದರು.
