HomeEntertainmentಸದಾ ಬೌದ್ಧಿಕ, ವೈಚಾರಿಕ ಆಲೋಚನೆಗಳಿಗೆ ಮುನ್ನುಡಿ ಬರೆಯುತ್ತಿದ್ದ ಕ್ರಿಯಾಶೀಲ ವ್ಯಕ್ತಿ: ಎನ್.ಎಸ್. ಶಂಕರ್ ನಿಧನಕ್ಕೆ ಡಿ.ಕೆ....

ಸದಾ ಬೌದ್ಧಿಕ, ವೈಚಾರಿಕ ಆಲೋಚನೆಗಳಿಗೆ ಮುನ್ನುಡಿ ಬರೆಯುತ್ತಿದ್ದ ಕ್ರಿಯಾಶೀಲ ವ್ಯಕ್ತಿ: ಎನ್.ಎಸ್. ಶಂಕರ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಲೇಖನಿಯ ಮೂಲಕ ಸಮಾಜದ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸುತ್ತಾ, ಸದಾ ಬೌದ್ಧಿಕ ಮತ್ತು ವೈಚಾರಿಕ ಆಲೋಚನೆಗಳಿಗೆ ಮುನ್ನುಡಿ ಬರೆಯುತ್ತಿದ್ದ ಕ್ರಿಯಾಶೀಲ ವ್ಯಕ್ತಿ ಎನ್. ಎಸ್. ಶಂಕರ್ ಅವರ ನಿಧನದ ಸುದ್ದಿ ತೀವ್ರ ಬೇಸರ ತಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪತ್ರಕರ್ತರಾಗಿ, ಸಿನಿಮಾ ನಿರ್ದೇಶಕರಾಗಿ, ಜನಪ್ರಿಯ ಅಂಕಣಕಾರರಾಗಿ ಗುರುತಿಸಿಕೊಂಡಿದ್ದ ಅವರು, ಕನ್ನಡ ದಲಿತ ಸಾಹಿತ್ಯ ಕ್ಷೇತ್ರಕ್ಕೆ ಹಲವು ಪ್ರಶಂಸನೀಯ ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಅವರ ಅಗಲಿಕೆ ಮಾಧ್ಯಮ ಕ್ಷೇತ್ರ ಹಾಗೂ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಟ. ಭಗವಂತನು ಮೃತರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ, ಅವರ ಕುಟುಂಬಸ್ಥರಿಗೆ ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಸಿದ್ಧರಾಮಯ್ಯ ಸಂತಾಪ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಿಯ ಪತ್ರಕರ್ತ ಮತ್ತು ಪ್ರತಿಭಾವಂತ ಚಿತ್ರ ನಿರ್ದೇಶಕ ಮತ್ತು ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದ ಎನ್‌.ಎಸ್.ಶಂಕರ್ ಅವರ ಸಾವಿನ ಸುದ್ದಿ ಕೇಳಿ ದು:ಖವಾಯಿತು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಪ್ರಜಾವಾಣಿ, ಮುಂಗಾರು, ಸುದ್ದಿಸಂಗಾತಿ ಮತ್ತು ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ಶಂಕರ್, ಹಲವು ಸಿನೆಮಾಗಳನ್ನು ನಿರ್ದೇಶನ ಮಾಡಿದ್ದರು. ಅವರೊಬ್ಬ ಕನ್ನಡದ ಬಹುಮುಖ ಪ್ರತಿಭೆ. ಇನ್ನಷ್ಟು ಕಾಲ ನಮ್ಮ ಜೊತೆ ಇದ್ದು, ನಮಗೆಲ್ಲ ಮಾರ್ಗದರ್ಶನ ನೀಡಬೇಕಾಗಿತ್ತು. ಅವರ ಕುಟುಂಬವರ್ಗಕ್ಕೆ ಸಂತಾಪಗಳು, ಅವರೆಲ್ಲರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular