HomeLatest NewsBIG NEWS: ದೆಹಲಿಯಲ್ಲಿ CWC ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

BIG NEWS: ದೆಹಲಿಯಲ್ಲಿ CWC ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇ‌ನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆ ವಿಚಾರವಾಗಿ, ನನ್ನನ್ನು ಕರೆದರೆ ಖಂಡಿತಾ ಹೋಗುತ್ತೇನೆ. ಆದರೆ ಇದುವರೆಗೂ ಕರೆದಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆಗೆ ಆಹ್ವಾನಿಸಲಾಗಿದೆ. ಮೂರು ರಾಜ್ಯಗಳ ಸಿಎಂಗೆ ಆಹ್ವಾನ ನೀಡಿದ್ದಾರೆ. ಆದರೆ ಡೆಪ್ಯುಟಿ ಸಿಎಂಗೆ ಕರೆದಿಲ್ಲ ಎಂದು ತಿಳಿಸಿದರು.

ಸಭೆಗೆ ಕರೆದರೆ ಹೋಗುತ್ತೇನೆ. ಕರೆದರೆ ಹೋಗಲಾಗದೇ ಇರಲು ಸಾಧ್ಯವೇ? ಎಂದು ಕೇಳಿದರು. ಇನ್ನು ಖರ್ಗೆ ಅವರ ಜತೆ ನಾಯಕತ್ವ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ.‌ ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಅವರು ಏನು ಹೇಳುತ್ತಾರೋ ಆ ರೀತಿ ಕೇಳಿಕೊಂಡು ಹೋಗುತ್ತೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular