HomeLatest NewsBIG NEWS: ನನಗೂ ಡಿ.ಕೆ.ಸುರೇಶ್ ಗೂ ಇಡಿ ಅಧಿಕಾರಿಗಳ ವಿಚಾರಣೆ ಹೊಸದೇನೂ ಅಲ್ಲ ಎಂದ ಡಿಸಿಎಂ...

BIG NEWS: ನನಗೂ ಡಿ.ಕೆ.ಸುರೇಶ್ ಗೂ ಇಡಿ ಅಧಿಕಾರಿಗಳ ವಿಚಾರಣೆ ಹೊಸದೇನೂ ಅಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಚಿನ್ನ ವಂಚನೆ ಮಾಡಿದ್ದ ಐಶ್ವರ್ಯಾ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಾಜಿ ಸಂಸದ ಡಿ.ಕೆ.ಸುರೇಶ್ ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಇಡಿ ತನಿಖೆಗೆ ಡಿ.ಕೆ.ಸುರೇಶ್ ಸಹಕರಿಸುತ್ತಾರೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಯಾವುದೇ ತನಿಖಾ ಸಂಸ್ಥೆ ನೋಟಿಸ್ ನೀಡಿದರೂ ಸ್ವೀಕರಿಸುತ್ತೇವೆ. ಕಾನೂನಿನ ಚೌಕಟ್ಟಿನಲ್ಲಿ ತನಿಖೆಗೆ ಹಾಜರಾಗಿ ಸಹಕರಿಸುತ್ತೇವೆ ಎಂದರು.

ಡಿ.ಕೆ.ಸುರೇಶ್ ಹೆಸರು ಹೇಳಿಕೊಂಡು ವಂಚನೆ ಮಾಡಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಗೆ ಡಿ.ಕೆ.ಸುರೇಶ್ ದೂರು ನೀಡಿದ್ದರು. ವಂಚನೆಗೊಳಗಾದ ಕೆಲವರು ಬಂದು ನನ್ನನ್ನು ಭೇಟಿಯಾಗಿದ್ದರು. ನಮ್ಮ ಹೆಸರು ದುರ್ಬಳಕೆ ಮಾಡಿಕೊಂಡಿದ್ದ ಬಗ್ಗೆ ದೂರು ನೀಡಿದ್ದೆವು. ಈಗ ಇಡಿಯವರು ನೋಟಿಸ್ ನೀಡಿದ್ದಾರೆ. ಗೌರವದಿಂದ ಸ್ವೀಕರಿಸಿದ್ದೇವೆ. ನನಗೂ, ಡಿ.ಕೆ.ಸುರೇಶ್ ಗೂ ಇಡಿ ಅಧಿಕಾರಿಗಳ ವಿಚಾರಣೆ ಹೊಸದೇನೂ ಅಲ್ಲ. ಅಧಿಕಾರಿಗಳ ಮುಂದೆ ಹಾಜರಾಗಿ ಸ್ಪಷ್ಟೀಕರಣ ನೀಡುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular