ತುಮಕೂರು: ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಡುತ್ತೇವೆ ಎಂದು ಮಾಜಿ ಸಿಎಂ ಸದಾನಂದಗೌಡ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ಧೋರಣೆಯಿಂದ ಬೇಸತ್ತು ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದರು.
ಡಿಕೆಶಿ ಬಾಹ್ಯ ಬೆಂಬಲದಿಂದ ನಮ್ಮವರು ಸಿಎಂ ಆಗಲು ನಮ್ಮ ಅಭ್ಯಂತರವಿಲ್ಲ. ಆದರೆ ನಮ್ಮ ಬೆಂಬಲದೊಂದಿಗೆ ಡಿಕೆಶಿ ಸಿಎಂ ಆಗಬಹುದಾ ಎಂಬುದನ್ನು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು. ಸದ್ಯ ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಬಿಜೆಪಿಯತ್ತ ಜನರ ಒಲವಿದೆ ಎಂದು ಹೇಳಿದರು.
