ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಮಹಾಲಕ್ಷ್ಮೀ ಆಗಮನವಾಗಿದ್ದು, ಡಿಸಿಎಂ ತಾತನಾದ ಖುಷಿಯಲ್ಲಿದ್ದಾರೆ.
ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ. ತಾತನಾದ ಸಂಭ್ರಮದಲ್ಲಿ ಡಿ.ಕೆ.ಶಿವಕುಮಾರ್ ಮೊಮ್ಮಗು ಹಾಗೂ ಮಗಳನ್ನು ನೋಡಲು ಆಸ್ಪತ್ರೆಗೆ ದೌಡಾಯಿಸಿ, ಇಬ್ಬರ ಆರೋಗ್ಯ ವಿಚಾರಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಮುಖ್ಯಸ್ಥ ದಿ.ವಿ.ಜಿ.ಸಿದ್ಧಾರ್ಥ ಹೆಗ್ಡೆ ಅವರ ಪುತ್ರ ಅಮರ್ತ್ಯ ಹೆಗ್ಡೆ 2021ರ ಫೆ.14 ರಂದು ವಿವಾಹವಾಗಿದ್ದರು. ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ನಲ್ಲಿ ಅದ್ಧೂರಿ ವಿವಾಹ ಕಾರ್ಯಕ್ರಮ ನಡೆದಿತ್ತು, ಆಗಿನ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಭಾಗವಹಿಸಿ, ನವಜೋಡಿಗೆ ಶುಭಹಾರೈಸಿದ್ದರು.

