ಬೆಂಗಳೂರು: ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿರುವಾಗಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ದೆಹಲಿಯೆ ಪ್ರಯಾಣ ಬೆಳೆಸಲಿದ್ದು, ಎರಡು ದಿನಗಳ ಕಲ ದೆಹಲಿಯಲ್ಲಿಯೇ ಇರಲಿದ್ದಾರೆ. ಇಂದು ಬೆಳಿಗ್ಗೆ 10:45ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದು, ಮಧ್ಯಾಹ್ನ ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ.
ಬಳಿಕ ದೆಹಲಿಯ ಎಐಸಿಸಿ ಕಚೇರಿ ಇಂದಿರಾ ಭವನದಲ್ಲಿ ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆ ಕುರಿತ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಇಂದು ಸಂಜೆ ಅಥವಾ ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಹಲವು ವಿಚಾರಗಳನ್ನು ಚರ್ಚಿಸುವ ಸಾಧ್ಯತೆ ಇದೆ. ಬಳಿಕ ಸಂಜೆ ದೆಹಲಿಯಿಂದ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ಒಟ್ಟಾರೆ ಡಿಸಿಎಂ ಡಿ.ಕೆ.ಶಿವಕುಮಾಅರ್ ದೆಹಲಿ ಪ್ರವಾಸ ತೀವ್ರ ಕುತೂಹಲ ಮೂಡಿಸಿದೆ. ರಾಜ್ಯ ಕಾಂಗ್ರೆಸ್ ಪಾಳಯದಲ್ಲಿಯೂ ಚಟುವಟಿಕೆಗಳು ಗರಿಗೆದರಿವೆ.

