HomeLatest NewsBIG NEWS: ನಾಯಕರನ್ನು ಭೇಟಿ ಮಾಡಲೆಂದೇ ದೆಹಲಿಗೆ ಬಂದಿದ್ದೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ನಾಯಕರನ್ನು ಭೇಟಿ ಮಾಡಲೆಂದೇ ದೆಹಲಿಗೆ ಬಂದಿದ್ದೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕರಲ್ಲಿ ಚಟುವಟಿಕೆ ಗರಿಗೆದರಿದೆ. ದೆಹಲಿಯಲ್ಲಿ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಿನ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸ್ಥಾನ ಎಂಬುದು ಬಹಿರಂಗವಾಗಿ ಚರ್ಚಿಸುವ ವಿಷಯವಲ್ಲ ಎಂದರು. ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ. ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ, ಅವರು ನೀಡುತ್ತಾರೆ ಎಂದರು.

ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ, ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ಮಾಡಬೇಕಾಗಿದ್ದು, ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ ಎಂದು ಇದೇ ವೇಳೆ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular