HomeLatest NewsBIG NEWS: ಧರ್ಮಸ್ಥಳ ಪ್ರಕರಣ: ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ

BIG NEWS: ಧರ್ಮಸ್ಥಳ ಪ್ರಕರಣ: ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರೇ ಷಡ್ಯಂತ್ರ ನಡೆಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಬಿಜೆಪಿಯವರಿಗೆ ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ತಿರುಗೇಟು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ಆರೋಪಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular