HomeLatest Newsನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ; ನಾನು ಸಿಎಂ ಸೇರಿದಂತೆ 140 ಶಾಸಕರೂ ಒಂದೇ, ನಮ್ಮದು...

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ; ನಾನು ಸಿಎಂ ಸೇರಿದಂತೆ 140 ಶಾಸಕರೂ ಒಂದೇ, ನಮ್ಮದು ಒಂದೇ ಗುಂಪು ಎಂದ ಡಿ.ಕೆ.ಶಿವಕುಮಾರ್

ಬೆಳಗಾವಿ: ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ, ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನದ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದೂ ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡಬೇಡಿ ಎಂದು ಹೇಳಿದರು.

ನಾನು ಯಾವುದೇ ಡಿನ್ನರ್ ಮೀಟಿಂಗ್ ಮಾಡಿಲ್ಲ. ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅವರಿಗೆ ಗೌರವ ನೀಡುವ ಉದ್ದೇಶದಿಂದ ಅವರ ಮನೆಗೆ ಹೋಗಿದ್ದೆ. ಇದರ ಹೊರತಾಗಿ ಬೇರೇನೂ ಇಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ ಎಂದರು.

ಮತ ಕಳ್ಳತನ ವಿರುದ್ಧದ ಹೋರಾಟದಲ್ಲಿ ಭಾಗವಹಿಸಲು ಶನಿವಾರ ದೆಹಲಿಗೆ ತೆರಳುತ್ತಿದ್ದೇನೆ. ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲೇ ಮತ ಕಳ್ಳತನ ವಿರುದ್ಧ ಹೋರಾಟ ಆರಂಭಿಸಿದರು. ನಾವು 2023ರಲ್ಲೇ ಚಿಲುಮೆ ಅಕ್ರಮದ ಮೂಲಕ ಮತ ಕಳ್ಳತನವನ್ನು ಪತ್ತೆ ಮಾಡಿದ್ದೆವು. ಲೋಕಸಭೆ ಚುನಾವಣೆ ಸಮಯದಲ್ಲಿ ಆಗಿರುವ ಮತ ಕಳ್ಳತನವನ್ನು ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ಜನರ ಮುಂದಿಟ್ಟಿದ್ದಾರೆ. ಚುನಾವಣಾ ಆಯೋಗವು ನಿರ್ದಿಷ್ಟ ರಾಜಕೀಯ ಪಕ್ಷದ ಅಸ್ತ್ರವಾಗಿದ್ದು, ನಾವು ಅದರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಈ ವಿಚಾರವಾಗಿ ರಾಜ್ಯದಲ್ಲಿ ನಡೆಸಿದ ಸಹಿ ಸಂಗ್ರಹ ಅಭಿಯಾನದಲ್ಲಿ 1.43 ಕೋಟಿ ಸಹಿ ಸಂಗ್ರಹವಾಗಿದ್ದು, ಎಲ್ಲಾ ಕಾರ್ಯಕರ್ತರು ಹಾಗೂ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular