ಮೈಸೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ತಾರಕಕ್ಕೇರಿದ್ದು, ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮಾನಿಗಳು, ಬೆಂಬಲಿಗರು ನಾಡ ಅದಿದೇವತೆ ಚಾಮುಂಡಿ ತಾಯಿ ಮೊರೆ ಹೋಗಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ತಾಯಿ ಚಾಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೆಳ್ಳಿ ಪಲ್ಲಕ್ಕಿಯಲ್ಲಿ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಪ್ರದಕ್ಷಿಣೆ ನಡೆಸಿ, ತಮ್ಮ ನೆಚ್ಚಿನ ನಾಯಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿದರು.
