HomeKarnatakaಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಂಕಷ್ಟ ಆಲಿಸಿ; ಸಚಿವರುಗಳಿಗೆ ಡಿಸಿಎಂ ಸೂಚನೆ

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಂಕಷ್ಟ ಆಲಿಸಿ; ಸಚಿವರುಗಳಿಗೆ ಡಿಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರದಿಂದ ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಚಿವರುಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ಪ್ರವಾಹವುಂಟಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ. ಸಚಿವರಿಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಂಕಷ್ಟ ಆಲಿಸಿ, ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸೂಚಿಸಿದ್ದಾರೆ.

ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕು. ಜನಪ್ರತಿನಿಧಿಗಳಾಗಿ ನಾವು ಅವರ ಜೊತೆ ನಿಲ್ಲೋಣ ಎಂದು ಕರೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular