BIG NEWS: ಸಚಿವ ಬೈರತಿ ಸುರೇಶ್ ಪುತ್ರ – ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರಿ ನಿಶ್ಚಿತಾರ್ಥ: ಜೊತೆಯಲ್ಲಿ ಕುಳಿತು ಊಟ ಸವಿದ ಡಿಸಿಎಂ, ರಾಜ್ಯಪಾಲರು

ಬೆಂಗಳೂರು: ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಜೊತೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನರವೇರಿದೆ.

ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಡಿಸಿಎಂ ಡಿ.ಕೆ.ಶಿವಕುಮಾರ್, ಆಡಳಿತಾರೂಢ ಕಾಂಗ್ರೆಸ್ ನ ಸಚಿವರು, ಶಾಸಕರು, ವಿಪಕ್ಷ ನಾಯಕರು ಪಾಲ್ಗೊಂಡು ನವಜೋಡಿಗೆ ಶುಭ ಹಾರೈಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ, ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಶರತ್ ಬಚ್ಚೇಗೌಡ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜೊತೆಯಲ್ಲಿ ಕುಳಿತು ಊಟ ಸವಿದಿದ್ದು, ವಿಶೇಷವಾಗಿ ಗಮನ ಸೆಳೆಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read