HomeKarnatakaBIG NEWS: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ, ನಿಲ್ಲಿಸುವುದೂ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

BIG NEWS: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ, ನಿಲ್ಲಿಸುವುದೂ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವುದೇವ್ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು.

ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆಯ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ ಮೃತಪಟ್ಟಿರುವವರ ಹೆಸರಿನಲ್ಲಿ ಪಡೆಯಲಾಗುತ್ತಿದೆ. ಗೃಹಜ್ಯೋತಿಯಲ್ಲಿ ಈ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತಪಟ್ಟಿರುವವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ತೆಗೆದುಕೊಳ್ಳಲಾಗಿದೆ. ಈ ರೀತಿ ದುರುಪಯೋಗವಾಗುವುದನ್ನು ತಪ್ಪಿಸಬೇಕು. ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂದು ಸರ್ಕಾರ ಚರ್ಚೆ ಮಾಡುತ್ತಿದೆ ಎಂದರು.

ಸ್ಥಿತಿವಂತರು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಬೇಡಿ ಎನ್ನುವ ಸಲಹೆಯೂ ಕೇಳಿಬರುತ್ತಿರ್ಯ್ವ ಬಗ್ಗೆ ಪ್ರತಿಕ್ರಿಯಿಸಿ, ಇದರ ಬಗ್ಗೆ ನೋಡೋಣ ಎಂದಷ್ಟೇ ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular