HomeKarnatakaHDK ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರಲ್ಲ: ಡಿಸಿಎಂ ತಿರುಗೇಟು

HDK ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರಲ್ಲ: ಡಿಸಿಎಂ ತಿರುಗೇಟು

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿಚಾರ ಗೊತ್ತಿದೆ. ಕೆಪಿಸಿಸಿ ಕಚೇರಿಯಿಂದಲೇ ಪತ್ರ ಬಹಿರಂಗವಾಗಿದೆ ಎಂಬ ಕೇದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರುವುದಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕೆಪಿಸಿಸಿ ಕಚೇರಿಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೂ ಏನು ಸಂಬಂಧ? ಎಂದು ಪ್ರಶ್ನಿಸಿದರು.

ನಾನು ನಿನ್ನೆ ಊರಿನಲ್ಲೇ ಇರಲಿಲ್ಲ. ಸಾತನೂರು, ಕನಕಪುರದಲ್ಲಿ ಕ್ಷೇತ್ರದ ಕೆಲಸ ಕಸಂಬಂಧ ಪ್ರವಾಸ ಕೈಗೊಂಡಿದ್ದೆ. ಕುಮಾರಸ್ವಾಮಿ ಅವರು ಕೆಪಿಸಿಸಿ ನೆನೆಸಿಕೊಂಡರೆ ನಾನು ಏನು ತಾನೇ ಮಾತನಾಡಲು ಸಾಧ್ಯ? ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಮಾರಸ್ವಾಮಿ ತಮ್ಮ ಬಳಿ 7 ಸಚಿವರ ಅಕ್ರಮಗಳ ಬಗ್ಗೆ ದಾಖಲೆಗಳಿವೆ ಎಂದು ಹೇಳುತ್ತಿದ್ದಾರೆ. ಅವರ ಬಳಿ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ. ಚಂದ್ರಶೇಖರ್ ಅವರನ್ನು ನಾನು ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ, ನನಗೆ ಅವರು ಸಿಕ್ಕಿಯೂ ಇಲ್ಲ ಗೊತ್ತೂ ಇಲ್ಲ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular