ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು; ಹೆಚ್.ಡಿ.ಕೆ.ಗೆ ಏಕವಚನದಲ್ಲೇ ಸವಾಲು ಹಾಕಿದ ಡಿಸಿಎಂ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇಬ್ಬರು ನಾಯಕರು ಆಸ್ತಿ ವಿಚಾರಗಳನ್ನು ಮುಂದಿಟ್ಟು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಜಮೀನು, ಭೂಮಿ ಬಗ್ಗೆ ಲೆಕ್ಕ ಕೇಳಿ ವಾಗ್ದಾಳಿ ನಡೆಸಿದ್ದ ಕುಮಾರಸ್ವಾಮಿ ಅವರಿಗೆ ಇಂದು ಡಿ.ಕೆ.ಶಿವಕುಮಾರ್, ನಿನ್ನ ಹಾಗೂ ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು ಎಂದು ಏಕವಚನದಲ್ಲಿ ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು ಎಂದು ಸವಾಲು ಹಾಕಿದ್ದಾರೆ.

ನಿನ್ನ ಅಧಿಕಾರವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರ ದುರುಪಯೋಗ ಮಾಡಿಕೊಂಡ ಎಂಬುದಕ್ಕೆ ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು.

ಕುಮಾರಸ್ವಾಮಿ ನನ್ನ ಪ್ರಶ್ನೆ ಮಾಡುತ್ತಾನೆ. ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೇ. ಆದರೆ ನಾನು ಅವರ ಸಹೋದರನ ಆಸ್ತಿ ಬಗ್ಗೆ ಮೊದಲು ಉತ್ತರ ನೀಡಲಿ. ಜೆಡಿಎಸ್, ಬಿಜೆಪಿ ಹಗರಣಗಳಿಗೆ ಉತ್ತರ ಕೊಡಲಿ ಎಂದು ಹೇಳುತ್ತಿದ್ದೇನೆ. ವಿಜಯೇಂದ್ರ ಹೇಳುತ್ತಾರೆ ಭ್ರಷ್ಟಾಚಾರದ ಪಿತಾಮಹಾ ನಾನು ಎಂದು. ನೀವು ಮೊದಲು ಹೇಳಿ, ನಿಮ್ಮ ಅಪ್ಪನನ್ನು ಯಾಕೆ ಜೈಲಿಗೆ ಕಳುಹಿಸಿದ್ರಿ? ಯಾಕೆ ರಾಜೀನಾಮೆ ಕೊಡಿಸಿದ್ರಿ? ಏಕೆ ಇದೆಲ್ಲಾ ಆಯಿತು? ಇದರ ಲೆಕ್ಕಾಚಾರ ಮೊದಲು ನೀಡಿ. ಮೊದಲು ನಿಮ್ಮ ಪಕ್ಷದ ಯತ್ನಾಳ್, ಗೂಳಿಹಟ್ಟಿ ಶೇಖರ್ ಗೆ ಉತ್ತರ ಕೊಡಿ ಆನಂತರ ನನಗೆ ಕೊಡುವಿರಂತೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read