HomeLatest NewsBIG NEWS: ಟನ್ ಗಟ್ಟಲೆ ಸಾಕ್ಷಾಧಾರಗಳನ್ನು ಇಟ್ಟುಕೊಂಡಿರುವ HDK ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲ ಏಕೆ?...

BIG NEWS: ಟನ್ ಗಟ್ಟಲೆ ಸಾಕ್ಷಾಧಾರಗಳನ್ನು ಇಟ್ಟುಕೊಂಡಿರುವ HDK ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲ ಏಕೆ? ಡಿಸಿಎಂ ಪ್ರಶ್ನೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನನ್ನ ಬಗ್ಗೆ ಟನ್ ಗಟ್ಟಲೆ ಸಾಕ್ಷಾಧಾರ, ದಾಖಲೆಗಳನ್ನು ಇಟ್ಟುಕೊಂಡಿರುವುದಾಗಿ ಹೇಳಿದ್ದಾರೆ. ಆದರೆ ಅವುಗಳನ್ನು ರಾಜ್ಯಪಾಲರಿಗೆ ಕಳುಹಿಸುತ್ತಿಲ್ಲ ಏಕೆ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ನನ್ನ ವಿರುದ್ಧ ಟನ್ ಗಟ್ಟಲೆ ಸಾಕ್ಷಾಧಾರಗಳನ್ನು ಇಟ್ಟುಕೊಂಡಿದ್ದಾರೆ. ಇದನ್ನು ಏಕೆ ಇಟ್ಟುಕೊಂಡಿದ್ದಾರೆ, ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲ ಏಕೆ? ಮಿಸ್ಟರ್ ಕುಮಾರಸ್ವಾಮಿ, ಈ ಡಿ.ಕೆ. ಶಿವಕುಮಾರ್ ನಿಮ್ಮ ಹಾಗೂ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವವನಲ್ಲ ಎಂದು ಗುಡುಗಿದರು.

ನಮ್ಮ ಕಷ್ಟ, ನಮ್ಮ ಶ್ರಮ, ನಮ್ಮ ಬದುಕು. ನಾವು ಆಸ್ತಿ ಮಾಡಿಕೊಳ್ಳುತ್ತೇವೆ. ಅದರ ಸತ್ಯಾಸತ್ಯತೆ ಸರ್ಕಾರ ಪರಿಶೀಲನೆ ಮಾಡಲಿ. ನಾನು ನಿನ್ನ ಚರಿತ್ರೆಯನ್ನು ಇನ್ನು ಬಿಚ್ಚಿಲ್ಲ. ನಿಮ್ಮ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂಬುದನ್ನು ನಾನಿನ್ನು ಬಿಚ್ಚಿಟ್ಟಿಲ್ಲ ಎಂದು ಟಾಂಗ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯವರು ನನ್ನ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾನೆ. ಆತನ ವಿರುದ್ಧ ವಿಧಾನಸೌಧದಲ್ಲಿ ಅತ್ಯಾಚಾರ ಮಾಡಿರುವ ಪ್ರಕರಣಗಳಿವೆ. ಎಲ್ಲವೂ ಸಾಬೀತಾಗುತ್ತಿವೆ. ಆತ ಆಡಿರುವ ಮಾತುಗಳು ಸಾಬೀತಾಗಿವೆ. ಈಗ ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಭ್ರಷ್ಟ ಬಿಜೆಪಿ, ದಳದ ವಿರುದ್ಧ ಹೋರಾಟ ಮಾಡಿ 2028ರಲ್ಲಿ ಮತ್ತೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular