HomeKarnatakaBREAKING NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್

BREAKING NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರನಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಸಿಬಿಐ ಸಲ್ಲಿಸಿರುವ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಅರ್ಹವಾಗಿಲ್ಲ. ರಾಜ್ಯ-ಸಿಬಿಐ ನಡುವಿನ ವಾದವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಬೇಕು. ಹಾಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಈ ಮೂಲಕ ಆದಾಯ ಮೀರಿ ಆಸ್ತಿಗಳಿಕೆ ಕೇಸ್ ನಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಸಿಬಿಐ ಮುಂದಿನ ನಡೆ ಕಾದುನೋಡಬೇಕಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular