ಬೆಂಗಳೂರು: ಜನವರಿ 6ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ ಆಗಿದ್ದಾರೆ. ಅವನ ಮಾತನ್ನು ಯಾರೂ ನಂಬಬೇಡಿ ಎಂದು ಹೇಳಿದ್ದಾರೆ.
ಬೆಂಗಳೂರಿನ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಜನವರಿ 6ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಶಾಸಕ ಕ್ಬಾಲ್ ಹುಸೇನ್ ಗೆ ಮಾತಿನ ಚಟ. ಅವನ ಮಾತು ಯಾರೂ ನಂಬಬೇಡಿ ಎಂದರು.
ಇಕ್ಬಾಲ್ ಹುಸೇನ್ ವಿರುದ್ಧ ಮೊದಲು ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದಿಸದರು.
