HomeLatest News'ಡಿ.ಕೆ. ಶಿವಕುಮಾರ್ ಅವರೇ ನಮ್ಮ ಮುಂದಿನ ಸಿಎಂ' : CLP ಸಭೆಗೂ ಮುನ್ನ ಯಾಸಿರ್ ಅಹ್ಮದ್...

‘ಡಿ.ಕೆ. ಶಿವಕುಮಾರ್ ಅವರೇ ನಮ್ಮ ಮುಂದಿನ ಸಿಎಂ’ : CLP ಸಭೆಗೂ ಮುನ್ನ ಯಾಸಿರ್ ಅಹ್ಮದ್ ಖಾನ್ ಹೇಳಿಕೆ

ಬೆಂಗಳೂರು : ಕರ್ನಾಟಕದ ನಾಯಕತ್ವ ಬದಲಾವಣೆಯ ಕುತೂಹಲದ ನಡುವೆಯೇ, ಕಳೆದ 40 ವರ್ಷಗಳ ಪಕ್ಷದ ನಿಷ್ಠೆಯನ್ನು ಪರಿಗಣಿಸಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡುವುದಾಗಿ ಕಾಂಗ್ರೆಸ್ ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ್, “ಇಂದು ಸಂಜೆ 4 ಗಂಟೆಗೆ ಸಿಎಲ್‌ಪಿ ಸಭೆಯನ್ನು ಕರೆಯಲಾಗಿದೆ. ಹಿರಿಯ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ರಣದೀಪ್ ಸುರ್ಜೇವಾಲ ಮತ್ತು ಎಲ್ಲ ಚುನಾಯಿತ ಶಾಸಕರು ಸಭೆಯಲ್ಲಿ ಉಪಸ್ಥಿತರಿರುತ್ತಾರೆ ಎಂದು ಹೇಳಿದರು.

ಪಕ್ಷದ ನಿಷ್ಠಾವಂತ ಶಾಸಕರಾಗಿ, ನಾವು ಇಂದು ನಮ್ಮ ನಾಯಕರನ್ನು ಆಯ್ಕೆ ಮಾಡುತ್ತೇವೆ… ಕಳೆದ 40 ವರ್ಷಗಳಿಂದ ಅವರು (ಡಿ.ಕೆ. ಶಿವಕುಮಾರ್) ಕಾಂಗ್ರೆಸ್‌ಗಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ ಮತ್ತು ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಅಸಂಖ್ಯಾತ ಜನರಿಗೆ ಬೆಂಬಲ ನೀಡಿದ್ದಾರೆ ಮತ್ತು ತಮ್ಮ ಜೀವನವನ್ನೇ ಪಕ್ಷಕ್ಕಾಗಿ ಮುಡಿಪಾಗಿಟ್ಟಿದ್ದಾರೆ. ಇಂದು ಯಾವುದೇ ಅನುಮಾನವಿಲ್ಲದೆ, ಡಿ.ಕೆ. ಶಿವಕುಮಾರ್ ಅವರು ನಮ್ಮ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ. ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular