ಬಿ.ಎಲ್. ಸಂತೋಷ್ ವಿರುದ್ಧ ಮಾತನಾಡಿದವನನ್ನು ಒದ್ದು ಒಳಗೆ ಹಾಕಲಾಗಿದೆ: ಆರೋಪ ಮಾಡಲು ಆತನ ಬಳಿ ದಾಖಲೆ ಏನಿದೆ? ತಿಮರೋಡಿ ವಿರುದ್ಧ ಡಿಸಿಎಂ ಕೆಂಡಾಮಂಡಲ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಮಾತನಾಡಿದವನನ್ನು ಒದ್ದು ಒಳಗಡೆ ಹಾಕಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹೇಶ್ ತಿಮರೋಡಿ ಬಿ.ಎಲ್.ಸಂತೋಷ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾನೆ. ಅದಕ್ಕೆ ಆತನನ್ನು ಒಳಗಡೆ ಹಾಕಲಾಗಿದೆ. ಆರೋಪಗಳನ್ನು ಮಾಡಲು ಆತನ ಬಳಿ ದಾಖಲೆ ಏನಿದೆ? ಎಂದು ಪ್ರಶ್ನಿಸಿದರು.

ನಮ್ಮ ನಡುವೆ ರಾಜಕೀಯವಾಗಿ ಸಾಕಷ್ಟು ಭಿನ್ನಾಭಿಪ್ರಾಯವಿರಬಹುದು. ಆದರೆ ನಮ್ಮ ವಿರೋಧಿಗಳ ಬಗ್ಗೆ ಏನೇನೋ ಮಾತನಾಡುತ್ತಾನೆ ಎಂದು ನಾವು ಖುಷಿಪಡುವುದಿಲ್ಲ. ಇಂದು ಅವರ ಬಗ್ಗೆ ಮಾತನಾಡಿದವರು ನಾಳೆ ನಮ್ಮ ಬಗ್ಗೆಯೂ ಮಾತನಾಡುತ್ತಾರೆ. ರಾಜಕೀಯ ಮಾಡಲಿ. ಯಾರು ಬೇಕಾದರೂ ರಾಜಕೀಯವಾಗಿ ಆರೋಪ ಮಾಡಬಹುದು ತಪ್ಪೇನಿಲ್ಲ. ಆದರೆ ಯಾರೇ ಆರೋಪ ಮಾಡುವಾಗಲೂ ಆಧಾರಗಳನ್ನು ಇಟ್ಟುಕೊಂಡು ಆರೋಪ ಮಾಡಲಿ. ಅದನ್ನು ಬಿಟ್ಟು ಸ್ವಾಭಿಮಾನಕ್ಕೆ ಧಕ್ಕೆ ತರುವಂತ ಮಾತುಗಳನ್ನು ಆಡಬಾರದು. ಈ ರಾಜ್ಯದಲ್ಲಿ ಯಾರ ಸ್ವಾಭಿಮಾನಕ್ಕೂ ಯಾರೂ ಧಕ್ಕೆ ತರುವಂತ ಕೆಲಸ ಮಾಡಬಾರದು ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read