ರಾಜಕೀಯ ಗುರು, ಮಾಜಿ ಸಿಎಂ ಎಸ್.ಎಂ ಕೃಷ್ಣ ಆಶೀರ್ವಾದ ಪಡೆದ ನೂತನ ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಮಾಜಿ ಮುಖ್ಯಮಂತ್ರಿ – ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಭೇಟಿ ವೇಳೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನೂತನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಶಾಲು ಹೊದಿಸಿ , ಹಾರ ಹಾಕಿ ಪುಸ್ತಕ ನೀಡಿ ಶುಭಕೋರಿದ್ದಾರೆ.

ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಎಸ್ ಎಂ ಕೃಷ್ಣ ಗುರು ಎಂದೇ ಪರಿಗಣಿಸಲಾಗಿದೆ. ರಾಜಕೀಯವನ್ನು ಮೀರಿ ಅವರಿಬ್ಬರು ಸಂಬಂಧಿಕರಾಗಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಮಗಳು ಐಶ್ವರ್ಯಾ ಎಸ್.ಎಂ. ಕೃಷ್ಣ ಮೊಮ್ಮಗನೊಂದಿಗೆ ವಿವಾಹವಾಗಿದ್ದಾರೆ.
ಕಾಂಗ್ರೆಸ್ ನಲ್ಲಿ 50 ವರ್ಷಗಳ ಕಾಲ ಇದ್ದ ಎಸ್ ಎಂ ಕೃಷ್ಣ ರವರು 2017 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read