ಮೈಸೂರು: ‘ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗಲ್ಲ’ ಎಂಬುದು ನನ್ನ ನಂಬಿಕೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಆಷಾಡ ಶುಕ್ರವಾರ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗಲ್ಲ ಎಂಬ ಹೇಳಿಕೆಯಲ್ಲಿ ನಂಬಿಕೆವುಳ್ಳವನು ನಾನು. ನನಗೆ ಏನು ಬೋಕೋ ಅದನ್ನು ನಾನು ಪ್ರಾರ್ಥಿಸಿದ್ದೇನೆ ಎಂದರು.
ಯಾವ ಚರ್ಚೆಯೂ ಈಗ ಬೇಡ. ನಾನು ರಾಜಕೀಯ ಮಾತನಾಡಲು ಇಲ್ಲಿಗೆ ಬಂದಿಲ್ಲ. ರಾಜ್ಯಕ್ಕೆ ಒಳ್ಳೆಯದಾಗಲೆಂದು ಬಂದಿದ್ದೇನೆ. ಯಾವುದೇ ರಾಜಕೀಯ ಚರ್ಚೆಗಳಿಗೆ ಆಸ್ಪದವಿಲ್ಲ ಎಂದು ಹೇಳಿದರು.