ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಬಂದಿರುವ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಹುದ್ದೆಗಾಗಿ ತೀವ್ರ ಪೈಪೋಟಿ ನಡೆಸಿದ್ದಾರೆ. ಈ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಾಗಸಾಧುಗಳು ಆಶಿರ್ವಾದ ಮಾಡಿದ್ದಾರೆ.
ಸಿಎಂ ಹುದ್ದೆ ಮೇಕ್ಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ವಿವಿಧ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಎರಡು ದಿನಗಳ ಹಿಂದೆ ಸಿದ್ದೇಶ್ವರ ಪಾಡುಕೆ ಪೂಜೆ ನೆರವೇರಿಸಿ ವಿಶೇಶ ಸಂಕಲ್ಪವನ್ನೂ ಮಾಡಿದ್ದರು. ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಾಸಾಧುಗಳು ಆಶಿರ್ವಾದ ಮಾಡುವ ಮೂಲಕ ಶುಭಕೋರಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ನಾಗಸಾಧುಗಳು ಡಿ.ಕೆ.ಶಿವಕುಮಾರ್ ಅವರ ತಲೆ ಮೇಲೆ ಕೈ ಇಟ್ಟು ಸಿಎಂ ಆಗಲಿ ಎಂದು ಆಶಿರ್ವಾದ ಮಾಡಿ ತೆರಳಿದ್ದಾರೆ.
