ಡಿಸಿಎಂ ಡಿ.ಕೆ.ಶಿವಕುಮಾರ್ ವಿರಚಿತ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆಗೊಳಿಸಿದ ಸಿಎಂ

ಬೆಂಗಳೂರು: ಕರ್ನಾಟಕ ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಿದರು.‌

ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮದ ನಿಯಮಿತ, ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ, ಕಾವೇರಿ ನೀರಾವರಿ ನಿಗಮ ನಿಯಮಿತ, ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಇವರುಗಳ ಸಂಯುಕ್ತ ಆಶ್ರಯದಲ್ಲಿ ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಮಾಡಲಾಯಿತು.

ವೇದಿಕೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಎನ್ ಎಸ್ ಬೋಸರಾಜು, ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳಕರ್, ಚಲುವರಾಯಸ್ವಾಮಿ, ಮಧು ಬಂಗಾರಪ್ಪ, ಮಂಕಾಳ್ ವೈದ್ಯ, ಡಿ.ಸುಧಾಕರ್, ಹಿರಿಯ ಶಾಸಕ ಆರ್.ವಿ.ದೇಶಪಾಂಡೆ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ವಿ ಕಾತರಕಿ ಅವರು ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read