HomeLatest NewsBIG NEWS: ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ:...

BIG NEWS: ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಮ್ಮ ಯೋಧರು ಭಯೋತ್ಪಾದನೆ ವಿರುದ್ಧ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನನ್ನ ಜನ್ಮದಿನದ ಸಮ್ದರ್ಭದಲ್ಲಿ ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದು ಡಿ ಕೆ ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular