ನವದೆಹಲಿ: ನವೆಂಬರ್ ಕ್ರಾಂತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ನವೆಂಬರ್ ಕ್ರಾಂತಿಯೂ ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹೈಕಮಾಂಡ್ ನಾಯಕರ ಭೇಟಿ ಬಳಿಕ ನವದೆಹಲಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್,ಯಾವ ಕ್ರಾಂತಿಯೂ ಈಗ ಆಗಲ್ಲ, ನವೆಂಬರ್ ನಲ್ಲಿಯೂ ಕ್ರಾಂತಿಯಾಗಲ್ಲ, ಡಿಸೆಂಬರ್, ಜನವರಿ, ಫೆಬ್ರವರಿಯಲ್ಲಿಯೂ ಕ್ರಾಂತಿಯಾಗಲ್ಲ. ಕ್ರಾಂತಿಯಾಗುತ್ತದೆ, ಯಾವಾಗ 2028ರ ಚುನಾವಣೆಯಲ್ಲಿ ಕ್ರಾಂತಿಯಾಗಲಿದೆ ಎಂದರು.
2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕ್ರಾಂತಿಯಾಗಿ ಕಾಂಗ್ರೆಸ್ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಕ್ರಾಂತಿಯಾಗಲಿದೆ ಎಂದು ಹೇಳಿದರು. ಅಲ್ಲಿಯವರೆಗೂ ಯಾವ ಕ್ರಾಂತಿಯೂ ಇಲ್ಲ, ಬದಲಾವಣೆಯೂ ಇಲ್ಲ ಎಂದು ತಿಳಿಸಿದರು.
