HomeLatest NewsBREAKING: ಇ-ಖಾತಾಗೆ ಹಣಕ್ಕೆ ಬೇಡಿಕೆ: ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಡಿಸಿಎಂ ಸೂಚನೆ

BREAKING: ಇ-ಖಾತಾಗೆ ಹಣಕ್ಕೆ ಬೇಡಿಕೆ: ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಡಿಸಿಎಂ ಸೂಚನೆ

ಬೆಂಗಳೂರು: ಇ-ಖಾತಾ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಟಿ.ಸಿಪಾಳ್ಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮ ನಡೆಸಿದ್ದು, ಈ ವೇಳೆ ಇಕೋ ಪಾರ್ಕ್ ನಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸಿದರು.

ಈ ವೇಳೆ ಸ್ಥಳೀಯ ನಿವಾಸಿಗಳು ಇ ಖಾತಾ ಮಾಡಿಕೊಡಲು ಕೆಲ ಅಧಿಕಾರಿಗಳು ಹಣ ಕೇಳುತ್ತಿದ್ದಾರೆ ಎಂದು ದೂರಿದರು. ಹಣ ಕೇಳಿದ ಅಧಿಕಾರಿಗಳ ಹೆಸರನ್ನು ಹೇಳುವಂತೆ ಡಿಸಿಎಂ ತಿಳಿಸಿದರು. ಇದಕ್ಕೆ ವ್ಯಕ್ತಿಯೋರ್ವರು ಎಆರ್ ಒ ಬಸವರಾಜ್ ಹಾಗೂ ಆರ್ ಐ ವಿಜನಪುರ ಎಂಬ ಅದಿಕಾರಿಗಳು ಇ-ಖಾತೆ ಮಾಡಿಕೊಡಲು 15 ಸಾವಿರ ಹಣ ಕೇಳುತ್ತಿದ್ದಾರೆ ಎಂದು ದೂರು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಣ ಕೇಳಿದ ಅಧಿಕಾರಿಗಳನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಥಳದಲ್ಲಿಯೇ ಸೂಚನೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular