HomeLatest Newsಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜಿವಾವಧಿ ಶಿಕ್ಷೆ: ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ...

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜಿವಾವಧಿ ಶಿಕ್ಷೆ: ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿರುವ ಬಗ್ಗೆ ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಚಾರವಾಗಿ ಈ ತೀರ್ಪಿನ ಬಗ್ಗೆ ನನ್ನ ಪ್ರತಿಕ್ರಿಯೆ ಕೇಳುವುದಕ್ಕಿಂತ ಅವರದೇ ಪಕ್ಷ ಜೆಡಿಎಸ್ ಹಾಗೂ ಅವರ ಮೈತ್ರಿ ಪಕ್ಷ ಬಿಜೆಪಿ ನಾಯಕರನ್ನು ಕೇಳಬೇಕು. ಏನು ಸರಿ, ಏನು ಸರಿಯಿಲ್ಲ ಅಂತಾ ಅವರು ಹೇಳಬೇಕು. ಅವರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಶಕ್ತಿ, ಸಾಮರ್ಥ್ಯ ಇದೆ. ಜೆಡಿಎಸ್ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರು, ಯುವ ಘಟಕದ ಅಧ್ಯಕ್ಷರು ಪ್ರತಿಕ್ರಿಯೆ ನೀಡಲಿ. ನಾವು ಕಾನೂನಿಗೆ ಗೌರವ ಕೊಟ್ಟು, ಅದು ಹೇಳಿದಂತೆ ಕೇಳಿಕೊಂಡು ಬರುತ್ತೇವೆ. ಅಶೋಕ್, ನಾರಾಯಣಸ್ವಾಮಿ, ಸಿ.ಟಿ. ರವಿ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಯಾಕೆ ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆ ವೇಳೆಯಲ್ಲೂ ಪ್ರಜ್ವಲ್ ರೇವಣ್ಣ ಇದನ್ನು ಷಡ್ಯಂತ್ರ ಎಂದು ವಾದ ಮಂಡಿಸಿದ ಬಗ್ಗೆ, ಈ ಬಗ್ಗೆ ನನಗೆ ಗೊತ್ತಿಲ್ಲ. ಅವರು ನ್ಯಾಯಾಲಯದಲ್ಲಿ ಕೊಟ್ಟಿರುವ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular