ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಸತ್ತುಹೋಗಿದೆ. ಸಿಎಂ-ಡಿಸಿಎಂ ನಡುವಿನ ಕಿತ್ತಾಟ ಹೊಡೆದಾಡಿಕೊಳ್ಳುವ ಹಂತಕ್ಕೆ ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಕಿತ್ತಾಟ ತಾರಕಕ್ಕೇರಿದೆ. ಸಿದ್ದರಾಮಯ್ಯನವರು ತನೇ 5 ವರ್ಷ ಮುಂದುವರೆಯುತ್ತೇನೆ ಎಂದಿದ್ದಾರೆ. ಅದಕ್ಕೆ ಡಿಸಿಎಂ ಅವರಿಗೆ ಒಳ್ಳೆಯದಾಗಲಿ ಎಂದಿದ್ದಾರೆ. ಆದರೆ ಸಚಿವರ, ಶಾಸಕ ಪ್ರತ್ಯೇಕ ಸಭೆಗಳನ್ನು ಮಾಡಿ ಬೆಂಬಲ ಪಡೆಯುವ ಪ್ಲಾನ್ ಮಾಡುತ್ತಿದ್ದಾರೆ. ಸಾಲದಕ್ಕೆ ನಿನ್ನೆ ಜೈಲಿಗೆ ಹೋಗಿ ಅಲ್ಲಿರುವ ಇಬ್ಬರು ಶಾಸಕರ ಬೆಂಬಲ ಕೇಳಿದ್ದಾರೆ. ಕಾಂಗ್ರೆಸ್ ಗೆ ಇಂತಹ ಪಾಡು ಬಂದಿರುವುದು ಶೋಚನೀಯ ಸ್ಥಿತಿ ಎಂದು ಗುಡುಗಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಶಾಸಕರ ಬೆಂಬಲ ಕೇಳಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಜೈಲುಪಾಲಾಗಿರುವ ಶಾಸಕರ ಬೆಂಬಲ ಕೇಳಲು ಜೈಲಿಗೆ ಹೋಗಿ ಚರ್ಚಿಸಿದ್ದಾರೆ ಎಂದರೆ ರಾಜ್ಯದ ಜನತೆ ತೀರ್ಮಾನ ಮಾಡಬೇಕು ಇದವರಿಗೆ ಎಂಥಹ ಸ್ಥಿತಿ ಬಂದ್ದೆ ಎಂದು. ರಾಜ್ಯದ ಇತಿಹಾಸದಲ್ಲಿಯೇ ಇಂತಹ ಘಟನೆ ನಡೆದಿರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
