ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ ಎಂದರು.
ಇನ್ನು ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ ಎಂದು ವ್ಯಂಗ್ಯವಾಡಿದರು.