HomeLatest NewsBIG NEWS: ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು: ಮಂಗಳಸೂತ್ರ, ಜನಿವಾರ ನಿಷೇಧ ಆದೇಶ ಕೇಂದ್ರ...

BIG NEWS: ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು: ಮಂಗಳಸೂತ್ರ, ಜನಿವಾರ ನಿಷೇಧ ಆದೇಶ ಕೇಂದ್ರ ಹಿಂಪಡೆಯಲಿ: ಡಿಸಿಎಂ ಆಗ್ರಹ

ಬೆಂಗಳೂರು: ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ. ಈ ಹಿಂದೆ ಸಣ್ಣ, ಸಣ್ಣ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸೆದ ಉದಾಹರಣೆಗಳನ್ನು ನೋಡಿದ್ದೇವೆ. ಇದರ ವಿರುದ್ಧ ಜನರೇ ಆಕ್ರೋಶ ವ್ಯಕ್ತಪಡಿಸಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ನಾನು, ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭಾಗವಹಿಸುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಹೋರಾಟ ಮಾಡಲಿದ್ದೇವೆ ಎಂದರು.

ಬಿಜೆಪಿಯವರು ಕೇಂದ್ರದಲ್ಲಿ ಇರುವ ಅವರದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಬೇಕು. ಏಕೆಂದರೆ ಅವರಿಂದಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು. ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular