BIG NEWS: ಶ್ರೀಗಳು, ಕಾರ್ಯಕರ್ತರು ಬಯಸಿದ್ದನ್ನು ತಪ್ಪು ಎಂದು ಹೇಳಲಾಗದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿಯಾಗಲಿ ಎಂದು ಪರೋಕ್ಷವಾಗಿ ಹಾರೈಸಿದ್ದ ರಂಭಾಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕಾರ್ಯಕರ್ತರು, ಶ್ರೀಗಳು, ಜನರು ಬಯಸುತ್ತಾರೆ. ಯಾರು ಏನೇ ಬಯಸಿದರು ಅದನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ ಎಂದಿದ್ದಾರೆ.

ನಾವೆಲ್ಲ ಪಕ್ಷ ಕಟ್ಟಿರುವವರು, ಪಕ್ಷದ ಶಿಸ್ತಿನ ಸಿಪಾಯಿಗಳು. ನಾನಾಗಲಿ ಸಿದ್ದರಾಮಯ್ಯ ಅವರಾಗಲಿ ಯಾರೇ ಆಗಿರಲಿ ನಾವೆಲ್ಲರೂ ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇವೆ ಎಂದುರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇದರ ಬಗ್ಗೆ ಮಾತನಾಡಲು ಹೋಗಬೇಡಿ ಎಂದು ಹೇಳಿದ್ದಾರೆ. ಮಾತನಾಡಿದರೆ ತಪ್ಪಾಗುತ್ತದೆ.‌ ಪಕ್ಷ ಏನು ಹೇಳುತ್ತದೆಯೋ ಅದನ್ನು ನಾವೆಲ್ಲರೂ ಕೇಳುತ್ತೇವೆ ಎಂದರು.

ಸಿಎಂ ಬದಲಾವಣೆ, ಹುದ್ದೆ ವಿಚಾರವಾಗಿ ಸಿದ್ದರಾಮಯ್ಯ ಅವರು ಅನೇಕ ಬಾರಿ ಹೇಳಿದ್ದಾರೆ. ಪದೇ, ಪದೇ ಮಾಧ್ಯಮಗಳು, ವಿರೋಧ ಪಕ್ಷದವರು, ನಮ್ಮ ಪಕ್ಷದಲ್ಲಿನ ಕೆಲವರು ಚಪಲಕ್ಕೆ ಮಾತನಾಡುತ್ತಾರೆ. ಈಗ ಅದರ ಅವಶ್ಯಕತೆಯಿಲ್ಲ ಎಂದು ಹೇಳಿದರು.

ಜನರು ನಮ್ಮನ್ನು ನಂಬಿ ಮತ ನೀಡಿದ್ದಾರೆ. ಅವರ ಆಶೋತ್ತರಗಳನ್ನು ನಾವು ಒಂದೊಂದಾಗಿ ಈಡೇರಿಸುತ್ತಿದ್ದೇವೆ. ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇವೆ. ಇನ್ನೂ ಅನೇಕ ಯೋಜನೆಗಳಿವೆ ಅದಕ್ಕೂ ನಾವು ತಯಾರು ಮಾಡಿಕೊಳ್ಳುತ್ತಿದ್ದೇವೆ. ದೇವರ, ವರುಣನ ಕೃಪೆಯಿಂದ ಉತ್ತಮ ಮಳೆ ಬೀಳುತ್ತಿದೆ ಎಂದರು.

ಒಡಂಬಡಿಕೆಯಂತೆ ನೀವು ಸಿಎಂ ಆಗಬೇಕು ಎನ್ನುವ ರಂಭಾಪುರಿ ‌ಶ್ರೀಗಳ ಮಾತಿನ ಬಗ್ಗೆ ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read