BIG NEWS: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್; ಇದೊಂದು ಸೂಕ್ಷ್ಮ ವಿಚಾರ; ಗೃಹ ಸಚಿವರೇ ಮಾತನಾಡುತ್ತಾರೆ ಎಂದ ಡಿಸಿಎಂ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಅಡಿ ಎಫ್ ಐ ಆರ್ ದಾಖಲಾಗಿದ್ದು, ಈ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಡಿಸಿಎಂ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇದೊಂದು ಸೂಕ್ಷ್ಮ ವಿಚಾರ. ನನಗೆ ಹೆಚ್ಚಿನ ಮಾಹಿತಿ ಇಲ್ಲ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ ಮಾತನಾಡುತ್ತಾರೆ ಎಂದು ಹೇಳಿದರು.

ಪೋಕ್ಸೋ ಕೇಸ್ ಅಡಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ವಿಚಾರ ಗೊತ್ತಾಯಿತು ಅಷ್ಟೇ. ಆದರೆ ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read