HomeKarnatakaBIG NEWS: ಬಿಜೆಪಿಯವರು ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ; ಸುಳ್ಳು ಆರೋಪ ಮಾಡ್ತಿದ್ದಾರೆ; ವಿಪಕ್ಷ ಬಿಜೆಪಿ ವಿರುದ್ಧ...

BIG NEWS: ಬಿಜೆಪಿಯವರು ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ; ಸುಳ್ಳು ಆರೋಪ ಮಾಡ್ತಿದ್ದಾರೆ; ವಿಪಕ್ಷ ಬಿಜೆಪಿ ವಿರುದ್ಧ ಡಿಸಿಎಂ ರೋಷಾಗ್ನಿ

ಮಂಡ್ಯ: ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಸದ್ದಿಲ್ಲದೇ ಕಾವೇರಿ ನೀರು ಹರಿಸುತ್ತಿದೆ ಎಂಬ ವಿಪಕ್ಷ ಬಿಜೆಪಿ ಆರೋಪಕ್ಕೆ ಕೆಂಡಾಮಂಡಲರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯವರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಮಗೆ ಕುಡಿಯಲು ನೀರಿಲ್ಲ. ಇಂತಹ ಸ್ಥಿತಿಯಲ್ಲಿ ನಾವ್ಯಾಕೆ ತಮಿಳುನಾಡಿಗೆ ನೀರು ಹರಿಸಲಿ? ಬಿಜೆಪಿಯವರು ಬರಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ ಎಂದು ಗುಡುಗಿದರು.

ನಮಗೇನು ಬುದ್ಧಿ ಇಲ್ಲಾ ಎಂದು ಕೊಂಡಿದ್ದಾರಾ ಅವರು? ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಮೇಕೆದಾಟು ಅನುಮತಿ ಕೊಡಿಸಲಿ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೂಡ ಈ ನಿಟ್ಟಿನಲ್ಲಿ ಕೇಂದ್ರದ ಬಳಿ ಮಾತನಾಡಲಿ ಎಂದು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿಗೆ ಬೇಕಾಗುವಷ್ಟು ನೀರಿನ ಸಂಗ್ರಹವಿದೆ. ಎಲ್ಲೆಲ್ಲಿ ನೀರಿನ ಸಮಸ್ಯೆಯಿದೆ ಅಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದೇವೆ. ಬಿಜೆಪಿ ತಮ್ಮ ತಪ್ಪು ಮುಚ್ಚಿಕೊಳ್ಳಲು ಆರೋಪ ಮಾಡುತಿದ್ದಾರೆ. ನೀರಿನ ವಿಚಾರವಾಗಿ ಅನಗತ್ಯವಾಗಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular