HomeKarnatakaBIG NEWS: 'ಚೊಂಬು’ ಜಾಹೀರಾತನ್ನು ಅರಗಿಸಿಕೊಳ್ಳಲಾಗದ ಬಿಜೆಪಿಯವರು 'ಪಿಕ್ ಪಾಕೇಟ್’ ಆರೋಪ ಮಾಡುತ್ತಿದ್ದಾರೆ; ಡಿಸಿಎಂ ತಿರುಗೇಟು

BIG NEWS: ‘ಚೊಂಬು’ ಜಾಹೀರಾತನ್ನು ಅರಗಿಸಿಕೊಳ್ಳಲಾಗದ ಬಿಜೆಪಿಯವರು ‘ಪಿಕ್ ಪಾಕೇಟ್’ ಆರೋಪ ಮಾಡುತ್ತಿದ್ದಾರೆ; ಡಿಸಿಎಂ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಕಾಂಗ್ರೆಸ್ ವಿರುದ್ಧ ಪಿಕ್ ಪಾಕೇಟ್ ಜಾಹೀರಾತು ನೀಡಿರುವ ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ನೀಡಿರುವ ಚೊಂಬಿನ ಜಾಹೀರಾತನ್ನು ಅರಗಿಸಿಕೊಳ್ಳಲಾಗದೇ ಬಿಜೆಪಿಯವರು ಪಿಕ್ ಪಾಕೇಟ್ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ನಾವು ಪಿಕ್ ಪಾಕೇಟ್ ಮಾಡಿದ್ದೇವೆ ಎಂದು ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿಯವರು ತಾವು ಮಾಡಿದ ಪಿಕ್ ಪಾಕೇಟ್ ನ್ನು ನಮ್ಮ ಮೇಲೆ ಹಾಕುತ್ತಿದ್ದಾರೆ. ನಾವು ನೀಡಿರುವ ಚೊಂಬು ಜಾಹೀರಾತನ್ನು ಅವರಿಗೆ ಅರಗಿಸಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ಅದಕ್ಕೆ ಈ ರೀತಿ ಸುಳ್ಳು ಹೇಳುತ್ತಿದ್ದಾರೆ ಎಂದು ಟಾಂಗ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬರ ಪರಿಹಾರಕ್ಕಾಗಿ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೆವು. ಅಲ್ಲಿ ನಮಗೆ ಜಯವಾಗಿದೆ. ಬರ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ನಮಗೆ ಪರಿಹಾರ ಶೀಘ್ರ ಸಿಗಲಿದೆ. ಅದಕ್ಕಾಗಿ ಸಾಂಕೇತಿಕ ಹೋರಾಟವನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular