HomeKarnatakaಹಾಲಿನ ದರ ವಿಚಾರದಲ್ಲಿ ರೈತರಿಗೆ ಸಹಾಯ ಮಾಡಬಾರದೇ? ವಿದ್ಯುತ್ ದರ ಕಡಿಮೆಯಾದರೂ ಈ ಬಗ್ಗೆ ಮಾತನಡಲಿಲ್ಲ:...

ಹಾಲಿನ ದರ ವಿಚಾರದಲ್ಲಿ ರೈತರಿಗೆ ಸಹಾಯ ಮಾಡಬಾರದೇ? ವಿದ್ಯುತ್ ದರ ಕಡಿಮೆಯಾದರೂ ಈ ಬಗ್ಗೆ ಮಾತನಡಲಿಲ್ಲ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಟಾಂಗ್

ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಹಾಲಿನ ದರ ವಿಚಾರದಲ್ಲಿ ರೈತರಿಗೆ ಸಹಾಯ ಮಾಡಬಾರದಾ? ವಿದ್ಯುತ್ ದರ ಕಡಿಮೆ ಮಾಡಿದರೂ ಈ ಬಗ್ಗೆ ಮಾತನಾಡಲಿಲ್ಲ ಈಗ ಪ್ರತಿಭಟನೆ ಮಾಡುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಕಡಿಮೆ ಇದೆ ಎಂದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ವಾಗ್ದಾಳಿ ನಡೆಸಿದರು.

ನಾವು ವಿದ್ಯುತ್ ಬೆಲೆ ಕಡಿಮೆ ಮಾಡಿದಾಗ ಅವರು ಮಾತನಾಡಲಿಲ್ಲ. ಅವರಿಗೆ ಜನರ ಮೇಲೆ ಕಾಳಜಿ ಇದ್ದರೆ, ಪೆಟ್ರೋಲ್, ಡೀಸೆಲ್, ಜಾನುವಾರುಗಳಿಗೆ ಹಾಕುವ ಬೂಸಾ ದರಗಳನ್ನು ಇಳಿಸಲಿ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆ ಕಡಿಮೆ ಇದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬೆಲೆಯನ್ನು ಪ್ರತಿ ಲೀಟರ್ ಗೆ ಕನಿಷ್ಠ 1 ಪೈಸೆಯಷ್ಟು ಏರಿಕೆ ಮಾಡಲೇಬೇಕಾಗಿದೆ. ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಜಲ ಮಂಡಳಿ ವಾರ್ಷಿಕವಾಗಿ 1 ಸಾವಿರ ಕೋಟಿ ನಷ್ಟ ಅನುಭವಿಸುತ್ತಿದ್ದು, ಮುಂದಿನ ಹಂತಗಳ ಯೋಜನೆ ಕೈಗೆತ್ತಿಗೊಳ್ಳಬೇಕಾದರೆ ದರ ಏರಿಕೆ ಅನಿವಾರ್ಯ. ಇದಕ್ಕೂ ಮುನ್ನ ಜನರಿಗೂ ನೀರಿನ ಪ್ರಾಮುಖ್ಯತೆ ಅರಿಯುವಂತೆ ಮಾಡಬೇಕು ಎಂದು ತಿಳಿಸಿದರು.

ಇನ್ನು ಕಸದ ವಿಚಾರವಾಗಿ ಹೇಳುವುದಾದರೆ, ಕೇಂದ್ರ ಬಿಜೆಪಿ ಸರ್ಕಾರ ಕಾನೂನು ಮಾಡಿದ್ದು, ಬಿಜೆಪಿ ಸರ್ಕಾರ 2022ರಲ್ಲೇ ದುಬಾರಿ ಸೆಸ್ ವಿಧಿಸಿದ್ದರು. ನಾವು ಅದನ್ನು ಕಡಿಮೆ ಮಾಡುತ್ತಿದ್ದೇವೆ. ಈ ವಿಚಾರವಾಗಿ ಜಾಹೀರಾತು ಹಾಗೂ ಪತ್ರಿಕಾ ಪ್ರಕಟಣೆ ಹೊರಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ನೋವು ನಮಗೂ ಅರಿವಾಗುತ್ತದೆ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ದಿನ ನಿತ್ಯ ಟೀಕೆ ಮಾಡಲಿ. ನಾವು ಜನರಿಗೆ ಉತ್ತಮ ಆಡಳಿತ ನೀಡಬೇಕು. ಕುಮಾರಸ್ವಾಮಿ ಅವರ ಸಹೋದರ ಹಾಲು ಒಕ್ಕೂಟಗಳ ಅಧ್ಯಕ್ಷರು. ಅವರಿಗೂ ಬೆಲೆ ಕಡಿಮೆ ಮಾಡುವ ಅವಕಾಶವಿದೆ. ಅವರು ಹಾಸನದಲ್ಲಿ ರೂ.4 ಕಡಿಮೆ ಮಾಡಿ ಹಾಲು ನೀಡಲಿ ನೋಡೋಣ. ರೈತರು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ನೀಡಲು ಈ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular