HomeKarnatakaBIG NEWS: ಬಿಜೆಪಿ ನಾಯಕರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

BIG NEWS: ಬಿಜೆಪಿ ನಾಯಕರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿವೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ 28 ಕ್ಷೇತ್ರ ಯಾಕೆ, 523 ಕ್ಷೇತ್ರಗಳಲ್ಲಿಯೂ ಅವರೇ ಗೆಲ್ಲಲಿ. ಯಾರು ಬೇಡ ಅಂತಾರೆ? ಎಂದು ಟಾಂಗ್ ನೀಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿಯೂ ನಾವೇ ಗೆಲ್ತೀವಿ ಎಂದು ಬಿಜೆಪಿಯವರು ಹೇಳಿದ್ದರು. ಆದ್ರೆ ನಾವು 136 ಸ್ಥಾನ ಗೆಲ್ಲುವುದಾಗಿ ಹೇಳಿದ್ದೆವು. ಅದರಂತೆ ಗೆದ್ದಿದ್ದೇವೆ. ಈಗ ಮತ್ತೆ ಬಿಜೆಪಿ ನಯಕರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಎಲ್ಲಾ ಕ್ಷೇತ್ರ ಅವರೇ ಗೆಲ್ಲಲಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular