BIG NEWS: ತಂದೆಯ ಆಸ್ತಿ ಪಾಲು ಸಿಕ್ಕಂತೆ ಅವರಿಗೆ ಅಧ್ಯಕ್ಷ ಸ್ಥಾನ ಸಿಕ್ಕಿದೆ; ಬಿ.ವೈ.ವಿಜಯೇಂದ್ರಗೆ ಡಿಸಿಎಂ ಟಾಂಗ್

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಒಂದು ದಿನವೂ ಕೇಂದ್ರ ಸರ್ಕಾರದ ಬಳಿ ಸಭೆ ಮಾಡದ ಬಿಜೆಪಿ ನಾಯಕರು ನಮ್ಮ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಅನುದಾನದ ಬಗ್ಗೆ ಕೇಳಿದರೆ ಬಿಜೆಪಿ ನಾಯಕರು ಈ ಹಿಂದಿನ ಮನಮೋಹನ್ ಸಿಂಗ್ ಸರ್ಕಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ, ಈಗ ಅವರಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಅವರು ಒಪ್ಪಿಕೊಂಡಂತೆ. ಮನಮೋಹನ್ ಸಿಂಗ್ ಅವರ ಸರ್ಕಾರ ಹೋಗಿ 10 ವರ್ಷಗಳಾಗಿವೆ. ಅವರಿಗೆ ಜ್ಞಾನ ಇರಬೇಕು. ದೇಶದಲ್ಲಿ ವಿದ್ಯಾವಂತರಿಲ್ಲದಿದ್ದರೂ ಪ್ರಜ್ಞಾವಂತರು ಇರಬೇಕು. 10 ವರ್ಷಗಳಿಂದ ದೇಶ ನಿಮ್ಮ ಕೈಗೆ ಅಧಿಕಾರ ಕೊಟ್ಟಿದೆ. ಮಾತೆತ್ತಿದರೆ ಡಬಲ್ ಇಂಜಿನ್ ಎಂದು ಹೇಳುತ್ತಿದ್ದರು. ಒಂದು ದಿನ ರಾಜ್ಯದ ಬರಗಾಲದ ಬಗ್ಗೆ ಮಾತನಾಡಲಿಲ್ಲ. ರಾಜ್ಯದ ಹಿತದ ಬಗ್ಗೆ ಕೇಂದ್ರ ಸರ್ಕಾರದ ಬಳಿ ಪ್ರಸ್ತಾಪಿಸಿಲ್ಲ. ಈಗ ಮಾತೆತ್ತಿದರೆ ರಾಜ್ಯ ಸರ್ಕಾರ ಬರ ಪರಿಹಾರ ನೀಡಲಿಲ್ಲ ಎನ್ನುತ್ತಿದ್ದಾರೆ ಎಂದು ಕಿಡಿಕಾರಿದರು

ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಪ್ರತಿ ರೈತರ ಖಾತೆಗೆ 2 ಸಾವಿರ ಹಾಕಿದ್ದೇವೆ. ಇದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿರುವುದರಲ್ಲಿ ಅನುಮಾನವಿಲ್ಲ. ನೀರಾವರಿ ಇಲಾಖೆ ವಿಚಾರಕ್ಕೆ ಬಂದರೆ ಕಳೆದ ವರ್ಷ ಬಜೆಟ್ ನಲ್ಲಿ 5,300 ಕೋಟಿ ಘೋಷಣೆ ಮಾಡಿದ್ದರೋ ಇಲ್ಲವೋ? ಅದರ ಹಣವನ್ನು ಬಿಡುಗಡೆ ಮಾಡಿದ್ದಾರಾ? ಮೆಟ್ರೋ ವಿಚಾರದಲ್ಲಿ ಏನಾದರೂ ಕ್ರಮ ಕೈಗೊಂಡಿದ್ದಾರಾ? ಈಗ ರಾಜ್ಯದ ಪರವಾಗಿ ಧ್ವನಿ ಎತ್ತದೆ ಬೇರೆ ದಾರಿ ಇಲ್ಲ. ಹೀಗಾಗಿ ನಮ್ಮ ಪ್ರತಿಭಟನೆಗೆ ಕೈಜೋಡಿಸುವಂತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೂ ಆಹ್ವಾನ ನೀಡುತ್ತೇನೆ ಎಂದರು.

ಇದೇ ವೇಳೆ ಎಲ್ಲಾ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿ ಶ್ರೇಷ್ಠ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿದ್ಸಿದ ಡಿ.ಕೆ.ಶಿವಕುಮಾರ್, ಅವರಿಗೆ ಏಳು ತಿಂಗಳಿಗೆ ಲಾಟರಿ ಹೊಡೆದು ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರ ತಂದೆಯ ಆಸ್ತಿ ಪಾಲು ಸಿಕ್ಕಂತೆ ಅಧ್ಯಕ್ಷ ಸ್ಥಾನ ಸಿಕ್ಕಿದೆ. ಹೀಗಾಗಿ ಅವರು ಮಾತನಾಡುತ್ತಿದ್ದಾರೆ. ಅವರ ಉತ್ಸಾಹಕ್ಕೆ ನಾನು ಧಕ್ಕೆ ತರುವುದಿಲ್ಲ ಎಂದು ಟಾಂಗ್ ನೀಡಿದರು.

ಇನ್ನು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಅವರು ಏನೆಲ್ಲಾ ಮಾತಾಡಿದ್ದರು. ಈಗ ಗ್ಯಾರಂಟಿ ಹೆಸರಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read