HomeKarnatakaನಾಯಕರ ಹಿಂದೆ ಗಿರಕಿ ಹೊಡೆಯುವವರಿಗೆ ಅವಕಾಶ ಕೊಡಲ್ಲ: ಸ್ಥಳೀಯವಾಗಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ:...

ನಾಯಕರ ಹಿಂದೆ ಗಿರಕಿ ಹೊಡೆಯುವವರಿಗೆ ಅವಕಾಶ ಕೊಡಲ್ಲ: ಸ್ಥಳೀಯವಾಗಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ನೀಡಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಲ್ಲ. ಇದರಿಂದ ಯಾವ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾದಿದ ಡಿಸಿಎಂ, ನಮಗೆ ಕೆಲಸ ಮಾಡುವವರು ಬೇಕು. ಅವರಿಗೆ ಜವಾಬ್ದಾರಿ ಕೊಟ್ಟರೆ ತಕ್ಕ ಫಲಿತಾಂಶ ಬರಬೇಕು. ನಮ್ಮ ಸುತ್ತ ಗಿರಿಗಿಟ್ಲೆಯಂತೆ ಸುತ್ತುತ್ತಿದ್ದರೆ ಆಗುವುದಿಲ್ಲ. ತಾಲೂಕಿನಲ್ಲಿ ಕೂತು, ಅಲ್ಲಿರುವ ಸಮಸ್ಯೆ ಬಗೆಹರಿಸಬೇಕು. ಫಲಿತಾಂಶ ಬರುವ ನಾಯಕತ್ವಕ್ಕೆ ಮಾತ್ರ ಆದ್ಯತೆ ನೀಡಲಾಗುವುದು ಎಂದರು.

ಪದಾಧಿಕಾರಿಗಳ ಪಟ್ಟಿ ಸಿದ್ಧವಾಗಿದೆ. ಯಾರಿಗೆ ಆಸಕ್ತಿ ಇಲ್ಲ ಅವರ ಜಾಗಕ್ಕೆ ಬೇರೆಯವರನ್ನು ನೇಮಿಸಲಾಗುವುದು. ಪಕ್ಷ ಸಂಘಟನೆ ವಿಚಾರದಲ್ಲಿ ನಮಗೆ ದಿನವಿಡೀ ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರು ಬೇಕು. ಬೇರೆಯವರ ಒತ್ತಡದ ಮೇರೆಗೆ ನೇಮಕ ಮಾಡಿಕೊಂಡು ಸಮಯ ವ್ಯರ್ಥ ಮಾಡುವುದರಲ್ಲಿ ಪ್ರಯೋಜನವಿಲ್ಲ. ಕೆಲಸ ಮಾಡುವವರಿಗೆ ಅವಕಾಶ ನೀಡಿ ಎಂದು ಎಐಸಿಸಿ ಆದೇಶ ನೀಡಿದೆ. ಈ ವಿಚಾರವಾಗಿ ನಾವು ವರದಿ ತರಿಸಿಕೊಂಡಿದ್ದು, ಸರಿಯಾಗಿ ಕೆಲಸ ಮಾಡುವವರಿಗೆ ಜವಾಬ್ದಾರಿ ನೀಡಲಾಗುವುದು. ಮೀಸಲಾತಿ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಈ ವಿಚಾರವಾಗಿ ಮಂತ್ರಿಗಳ ಅಭಿಪ್ರಾಯ ಪಡೆಯುತ್ತಿದ್ದು, ಈ ವಾರವೇ ಈ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular