ಸುಳ್ಳಿಗೆ ಮತ್ತೊಂದು ಹೆಸರೇ HDK: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ವಿಜಯಪುರ: ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಕಿಡಿಕಾರಿದ್ದಾರೆ.

ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ ಮಾಹಿತಿಯನ್ನು ಡಿ.ಕೆ.ಶಿವಕುಮಾರ್ ಅವರೇ ನೀಡಿದ್ದಾರೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಪ್ರತಿಕ್ರ್ಯಿಸಿ, ಕುಮಾರಸ್ವಾಮಿ ಒಬ್ಬ ಮೆಂಟಲ್. ಅವರ ಮಾನಸಿಕ ಆರೋಗ್ಯ ಹದಗೆಟ್ಟಿರ ಬೇಕು. ತಲೆ ಕೆಟ್ಟು ಹೋಗಿದೆ ಎಂದು ಗುಡುಗಿದರು.

ರಾಮನಗರ ಜಿಲ್ಲೆ ಹೆಸರು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಾವಣೆ ಬಗ್ಗೆ ಹೆಚ್.ಡಿ.ಕೆ ಟೀಕೆ ವಿಚಾರವಾಗಿ, ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ. ಮೊದಲು ಎಚ್.ಡಿ.ಕುಮಾರಸ್ವಾಮಿ ಎನ್ನುವ ಹೆಸರಿನಲ್ಲಿರುವ ಅವರ ಊರಿನ ಹೆಸರು ಹಾಗೂ ತಂದೆಯ ಹೆಸರನ್ನು ಏಕೆ ಇನ್ನು ಇಟ್ಟುಕೊಂಡಿದ್ದಾರೆ. ಮೊದಲು ಅದನ್ನು ಬದಲಾವಣೆ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ನಾವು ಬೆಂಗಳೂರು ಜಿಲ್ಲೆಯವರು. ಒಂದೊಂದು ಊರಿನ ಹೆಸರಿಗೆ ತನ್ನದೇ ಆದ ಇತಿಹಾಸವಿರುತ್ತದೆ. ಮದ್ರಾಸ್ ಅನ್ನು ಮತ್ತೆ ಏಕೆ ಚೆನ್ನೈ ಎಂದು ಕರೆದರು‌. ಗುಲ್ಬರ್ಗಾವನ್ನು ಕಲಬುರ್ಗಿ ಎಂದು ಮರುನಾಮಕರಣ ಮಾಡಲಾಗಿದೆ. ನಮಗೂ ನಮ್ಮದೇ ಆದಂತಹ ಆಸೆ ಇರುತ್ತದೆ. ಅವರಿಗೆ ಏನು ತೊಂದರೆಯಾಗಿದೆ? ಎಂದು ಪ್ರಶ್ನಿಸಿದರು.

ರಿಯಲ್ ಎಸ್ಟೇಟ್ ಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಹೌದು, ನಮ್ಮ ಹಳ್ಳಿಯ ಜನ ಉದ್ದಾರವಾಗಬೇಕು. ಎಲ್ಲರಿಗೂ ಉದ್ಯೋಗ ಸಿಗಬೇಕು. ನಮ್ಮ ಜನರ ಆಸ್ತಿ ಮೌಲ್ಯ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ಹೊರಗಡೆ ದೇಶದಿಂದ ಜನರು ಬಂದು ಬಂಡವಾಳ ಹೂಡಿಕೆ ಮಾಡಬೇಕು. ಅಭಿವೃದ್ಧಿ ಆಗಬೇಕು ಎಂಬುದು ನಮ್ಮ ಆಸೆ ಎಂದರು.

ಸಂಸತ್ ಕ್ಷೇತ್ರವನ್ನು ಮೊದಲು ಕನಕಪುರ ಎಂದು ಕರೆಯಲಾಗುತ್ತಿತ್ತು. ಅದನ್ನು ಬೆಂಗಳೂರು ಗ್ರಾಮಾಂತರ ಎಂದು ಆನಂತರ ಏಕೆ ಮಾಡಿದರು? ರಾಮನಗರದ ಹೆಸರು ಬದಲಾವಣೆ ಮಾಡುತ್ತಿಲ್ಲ. ಜತೆಗೆ ರಾಮನಗರವೇ ಜಿಲ್ಲಾ ಕೇಂದ್ರವಾಗಿರುತ್ತದೆ. ನಾವು ಕೇವಲ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read