HomeKarnatakaBIG NEWS: ಸಿನಿಮಾ ಸ್ಟೈಲ್ ನಲ್ಲಿ ಮಾತನಾಡ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ತಿರುಗೇಟು

BIG NEWS: ಸಿನಿಮಾ ಸ್ಟೈಲ್ ನಲ್ಲಿ ಮಾತನಾಡ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ತಿರುಗೇಟು

ಬೆಂಗಳೂರು: ಸರ್ವಪಕ್ಷ ಸಭೆಗೆ ಗೋಡಂಬಿ ದ್ರಾಕ್ಷಿ ತಿನ್ನಲು ಹೋಗಬೇಕಿತ್ತಾ ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ಸಿನಿಮಾ ಶೈಲಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಗೋಡಂಬಿ, ದ್ರಾಕ್ಷಿ ತಿನ್ನಲು ನಾವು ಕರೆದಿದ್ದೇವಾ? ಹಾಗಿದ್ದರೆ, ಕುಮಾರಸ್ವಾಮಿ ಅವರು ತಮ್ಮ ಪಕ್ಷದ ನಾಯಕರನ್ನು ಸರ್ವಪಕ್ಷ ಸಭೆಗೆ ಗೋಡಂಬಿ, ದ್ರಾಕ್ಷಿ ತಿನ್ನಲು ಕಳುಹಿಸಿದ್ದರೆ? ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿಗೆ ರಾಜಕಾರಣ, ಟೀಕೆ, ಆರೋಪ, ಹಿಟ್ ಅಂಡ್ ರನ್ ಮಾಡುವುದು ಬಿಟ್ಟರೆ, ಕಾವೇರಿ ನೀರು, ನಮ್ಮ ರೈತರ ಹಿತ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂಬುದು ಸ್ಪಷ್ಟ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರಿಗೆ ಅಸೂಯೆ ಬಿಟ್ಟರೆ ಬೇರೇನೂ ಇಲ್ಲ. ಮೊದಲಿಂದಲೂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಎಲ್ಲಾ ವಿಚಾರವನ್ನು ಬಹಿರಂಗವಾಗಿ ಚರ್ಚೆ ಮಾಡೋಣ ಬನ್ನಿ ಎಂದು ಕರೆಯುತ್ತಿದ್ದೇನೆ. ಕಳೆದ ಬಾರಿ ಸದನದಲ್ಲಿ ಚರ್ಚೆಗೆ ಕರೆದಾಗಲೂ ಬರಲಿಲ್ಲ. ಈಗಲೂ ಬರುತ್ತಿಲ್ಲ ಬರಿ ಹಿಟ್ ಆಂಡ್ ರನ್ ಮಾಡುತ್ತಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular