BIG NEWS: ಕಾಂಗ್ರೆಸ್ ಶಾಸಕರಿಗೆ HDKಯಿಂದ ಆಫರ್, ಕರೆ ಮಾಡಿ ಧಮ್ಕಿ ಹಾಕಿದ್ದಾರೆ; ಡಿಸಿಎಂ ಆರೋಪ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿದ್ದಾರೆ. ಧರ್ಮಿ ಕೂಡ ಹಾಕಿದ್ದಾರೆ ಎಂದು ಡಿಸಿಎ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮ್ಕಿ ಹಾಕುತ್ತಿರುವ ಬಗ್ಗೆ ಮಾಹಿತಿ ಇದೆ. ಶಸಕರೇ ಈ ಬಗ್ಗೆ ಹೇಳುತ್ತಿದ್ದಾರೆ ಎಂದರು.

ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ ಎಂದು ಟಾಂಗ್ ನೀಡಿದರು.

ಇನ್ನು ವಿಪಕ್ಷಗಳು ಅಡ್ಡಮತದಾನದ ಯತ್ನ ಮಾಡುತ್ತಿರುವ ವಿಚರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಸುಮ್ಮನೇ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read