HomeKarnatakaBIG NEWS: ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಸಿಎಂ

BIG NEWS: ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಸಿಎಂ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಲಾಭಿ ಜೋರಾಗಿದ್ದು, ಒಂದೆಡೆ ಸಚಿವ ಕೆ.ಎನ್ ರಾಜಣ್ಣ ಹಾಗೂ ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಡುವೆ ಪೈಪೋಟಿ ಆರಂಭವಾಗಿದೆ. ಈ ನಡುವೆ ದೆಹಲಿಗೆ ತೆರಳಿ ಹೈಕಾಂಡ್ ನಾಯಕರೊಂದಿಗೆ ಚರ್ಚೆ ನಡೆಸಿರುವ ರಾಜಣ್ಣ, ಅಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುವುದಾಗಿ ಹೇಳಿದ್ದರು.

ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ತನಗೆ ಕೊಟ್ಟರೆ ನಿಭಾಯಿಸುವುದಾಗಿ ಹೇಳಿರುವ ಸಚಿವ ರಾಜಣ್ಣ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಲು ಡಿಸಿಎಂ ನಿರಾಕರಿಸಿದ್ದು, ಸ್ಥಳದಿಂದ ತೆರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular