HomeKarnatakaBIG NEWS: ವಕೀಲರ ಪ್ರತಿಭಟನೆ ರಾಜಕೀಯ ಪ್ರೇರಿತ; ನಮ್ಮ ಬಳಿ ಬಂದು ಮಾತನಾಡಿದರೆ ಚರ್ಚೆಗೆ ಸಿದ್ದ...

BIG NEWS: ವಕೀಲರ ಪ್ರತಿಭಟನೆ ರಾಜಕೀಯ ಪ್ರೇರಿತ; ನಮ್ಮ ಬಳಿ ಬಂದು ಮಾತನಾಡಿದರೆ ಚರ್ಚೆಗೆ ಸಿದ್ದ ಎಂದ ಡಿಸಿಎಂ

ಬೆಂಗಳೂರು: ಬಿಜೆಪಿಯವರು ವಕೀಲರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ರಾಮನಗರದಲ್ಲಿ ನಡೆಯುತ್ತಿರುವ ವಕೀಲರ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ರಾಜಕಾರಣ ಬಿಟ್ಟು ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ನೀಡುವ ಪ್ರಯತ್ನ ಮಾಡುತ್ತೇವೆ ಎಂದರು.

ರಾಮನಗರದಲ್ಲಿ ರಾಜಕಾರಣ ನಡೆಯುತ್ತಿದೆ. ರಾಜಕಾರಣ ಮಾಡುವವರನ್ನು ನಾನು ಬೇಡ ಎನ್ನಲ್ಲ. ಈ ವಿಚಾರವಾಗಿ ಚರ್ಚೆ ಮಾಡಲು ಕುಮಾರಸ್ವಾಮಿ ಅವರು ಸದನದಲ್ಲಿ ಸಮಯ ಕೇಳಿದ್ದಾರಂತೆ. ಅದಕ್ಕೆ ಗೃಹ ಸಚಿವರು ಉತ್ತರ ನೀಡುತ್ತಾರೆ. ಕಾನೂನು ಬದ್ಧವಾಗಿ ಅಧಿಕಾರಿಗಳು ಎಲ್ಲರಿಗೂ ರಕ್ಷಣೆ, ಗೌರವ ನೀಡಬೇಕು. ರಾಜಕೀಯ ಬಿಟ್ಟು ನಮ್ಮ ಬಳಿ ಬಂದು ಕೂತು ಮಾತನಾಡಿದರೆ ಚರ್ಚೆಗೆ ಸಿದ್ಧ. ಇಲ್ಲ ರಾಜಕಾರಣವನ್ನೇ ಮಾಡುತ್ತೀವಿ ಎಂದರೆ ರಾಜಕಾರಣ ಮಾಡಿಕೊಳ್ಳಲಿ ನಮ್ಮ ಅಭ್ಯಂತರವೇನೂ ಇಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular