ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆ: ತಪ್ಪಿನ ಬಗ್ಗೆ ಪರಾಮರ್ಶೆ ನಡೆಸಿ ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂಬುದನ್ನು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸ್ಜಿವಕುಮಾರ್, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಬೇರೆ ಬೇರೆ ಜಿಲ್ಲೆಗಳ ಪರಾಮರ್ಶೆಗೆ ಶೀಘ್ರವೇ ದಿನಾಂಕ ನಿಗದಿ ಮಾಡಲಾಗುವುದು. ಇಂದು ಬೆಂಗಳೂರಿನ ಫಲಿತಾಂಶಗಳ ಬಗ್ಗೆ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳ ಸಭೆ ನಡೆಸಲಾಗುವುದು. ಶೀಘ್ರವೇ ಇದಕ್ಕೆ ದಿನಾಂಕ ನಿಗದಿ ಮಾಡುತ್ತೇವೆ. ಎಲ್ಲೆಲ್ಲಿ ಏನಾಗಿದೆ ಎನ್ನುವ ಸತ್ಯಶೋಧನೆ ಹಾಗೂ ಪರಿಹಾರ ಹುಡುಕುವ ಕೆಲಸ ಆಗಬೇಕು ಎಂದರು.

ನಾವು 14- 15 ಸ್ಥಾನಗಳನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿತ್ತು. ಆದರೆ ನಿರೀಕ್ಷಿತ ಸ್ಥಾನಗಳನ್ನು ಗಳಿಸಲು ನಾವು ವಿಫಲರಾಗಿದ್ದೇವೆ. ಜನರ ತೀರ್ಪಿಗೆ ನಾವು ತಲೆಬಾಗಲೇ ಬೇಕು ಎಂದರು. ಪ್ರಮುಖ ನಾಯಕರ ಊರುಗಳಲ್ಲೇ ಮತ ಗಳಿಕೆಯಾಗಿಲ್ಲ. ನನ್ನ ಕ್ಷೇತ್ರದ ಅನೇಕ ನಾಯಕರ ಊರಿನಲ್ಲಿ ನಿರೀಕ್ಷಿತ ಮಟ್ಟಕ್ಕೆ ಮತಗಳು ಬಂದಿಲ್ಲ. ಇದಕ್ಕೆ ಏನಾದರೂ ಒಂದು ಸಬೂಬು ಹೇಳಿದರೆ ಯಾರು ಕೇಳುವುದಿಲ್ಲ. ಆದ ಕಾರಣ ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read