HomeLatest Newsಪಹಲ್ಗಾಮ್ ನಲ್ಲಿ ನಡೆದ ಉಗ್ರರ ಹೇಡಿತನದ ಕೃತ್ಯಕ್ಕೆ ಆಪರೇಶನ್ ಸಿಂಧೂರ ಪ್ರತ್ಯುತ್ತರ: ಡಿಸಿಎಂ ಡಿ.ಕೆ.ಶಿವಕುಮಾರ್

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಹೇಡಿತನದ ಕೃತ್ಯಕ್ಕೆ ಆಪರೇಶನ್ ಸಿಂಧೂರ ಪ್ರತ್ಯುತ್ತರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಶ್ಲಾಘಿಸಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ ಎಂದು ಡಿಸಿಎಂ ತಿಳಿಸಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಶನ್ ಸಿಂಧೂರ ಉತ್ತಮ ಪ್ರತ್ಯುತ್ತರವಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ ಎಂದು ತಿಳಿಸಿದರು.

ನಮ್ಮ ರಾಜ್ಯ ಮಾತ್ರವಲ್ಲ, ದೇಶದ ಇತರೆ ಭಾಗಗಳ ಜನರು ಪಹಲ್ಗಾಂ ದಾಳಿಯಲ್ಲಿ ಮೃತರಾಗಿದ್ದರು. ಈ ವಿಚಾರದಲ್ಲಿ ಕೇವಲ ಕರ್ನಾಟಕ ಎಂದು ನೋಡಬಾರದು, ಇಡೀ ದೇಶವೇ ಒಂದು ಎಂದು ನೋಡಬೇಕು. ನಾವೆಲ್ಲರೂ ಈ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲಬೇಕು, ಅದೇ ರೀತಿ ಒಟ್ಟಾಗಿ ನಿಂತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ನಿಂತಿದ್ದೇವೆ. ಬೆಲೆ ಏರಿಕೆ ವಿಚಾರವಾಗಿ ಇಂದು ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಅದನ್ನು ನಾವು ರದ್ದುಗೊಳಿಸಿದ್ದೇವೆ. ಈ ಸಂದರ್ಭದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಹೀಗಾಗಿ ಈ ಪ್ರತಿಭಟನಾ ಸಮಾವೇಶವನ್ನು ಮುಂದೂಡಿದ್ದೇವೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular