HomeKarnatakaBIG NEWS: ರಾಮನಗರದಲ್ಲಿನ ಗಲಾಟೆ, ಸಂಘರ್ಷಗಳಿಗೆ ಮಾಜಿ ಸಿಎಂ HDK ನೇರ ಕಾರಣ; ಡಿಸಿಎಂ ಗಂಭೀರ...

BIG NEWS: ರಾಮನಗರದಲ್ಲಿನ ಗಲಾಟೆ, ಸಂಘರ್ಷಗಳಿಗೆ ಮಾಜಿ ಸಿಎಂ HDK ನೇರ ಕಾರಣ; ಡಿಸಿಎಂ ಗಂಭೀರ ಆರೋಪ

ಬೆಂಗಳೂರು: ರಾಮನಗರದಲ್ಲಿ ನಡೆಯುತ್ತಿರುವ ವಕೀಲರ ಪ್ರತಿಭಟನೆ, ದಲಿತರ ಧರಣಿ, ಗಲಾಟೆ, ಸಂಘರ್ಷಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇರ ಕಾರಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಮನಗರದಲ್ಲಿ ಡಿ.ಕೆ ಸಹೋದರರಿಂದ ಅಶಾಂತಿ ಸೃಷ್ಟಿಯಾಗಿದೆ ಎಂಬ ಹೆಚ್.ಡಿ.ಕೆ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ರಾಮನಗರದಲ್ಲಿ ನಡೆಯುತ್ತಿರುವ ಎಲ್ಲಾ ಗಲಾಟೆಗಳಿಗೆ ಕುಮಾರಸ್ವಾಮಿ ಕಾರಣ ಎಂದಿದ್ದಾರೆ.

ರಾಮನಗರದಲ್ಲಿ ಪಿಎಸ್ ಐ ಸಸ್ಪೆಂಡ್ ವಿಚಾರವಾಗಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಹೇಳಿದ್ದೆ. ಶಾಸಕರು ಕೂಡ ಇದನ್ನೇ ಹೇಳಿದ್ದಾರೆ. ಇಲ್ಲಿ ಯಾರಿಗೂ ಅನ್ಯಾಯವಾಗಬಾರದು. ತನಿಖೆ ಮಾಡಿ ತಪ್ಪಿದ್ದರೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೆವು. ಈ ವಿಚಾರವಾಗಿ ಬಿಜೆಪಿ-ಜೆಡಿಎಸ್ ನಾಯಕರು ಅನಗತ್ಯವಾಗಿ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ, ಹಾಗಾಗಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular