HomeKarnatakaBIG NEWS: ಸಂಸದ ರಾಘವೇಂದ್ರ ಮತ್ತೊಮ್ಮೆ ಗೆಲ್ಲಲಿ ಎಂದ ಶಾಮನೂರು ಶಿವಶಂಕರಪ್ಪಗೆ ಡಿಸಿಎಂ ಟಾಂಗ್

BIG NEWS: ಸಂಸದ ರಾಘವೇಂದ್ರ ಮತ್ತೊಮ್ಮೆ ಗೆಲ್ಲಲಿ ಎಂದ ಶಾಮನೂರು ಶಿವಶಂಕರಪ್ಪಗೆ ಡಿಸಿಎಂ ಟಾಂಗ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಮತ್ತೊಮ್ಮೆ ಗೆಲ್ಲಬೇಕು ಎಂದು ಹೇಳಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನೀಡಿರುವ ಈ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಡಿಮಿಡಿಗೊಂಡಿದ್ದಾರೆ.

ಶಾಮನೂರು ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮರ್, ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಲೋಕಸಭೆ ಚುನವಣೆಯಲ್ಲಿ ಕಾಂಗ್ರೆಸ್ ನಿರ್ನಾಮ ಮಾಡಬೇಕು ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ, ವಿಧನಸಭಾ ಚುನಾವಣೆಯಲ್ಲಿ ಶೆಟ್ಟರ್ ಬಿಜೆಪಿ ನಿರ್ನಾಮ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಬಿಜೆಪಿ ಸೋಲಿಸಬೇಕು ಎಂದಿದ್ದರು. ಈಗ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗಿ ಕಾಂಗ್ರೆಸ್ ಸೋಲಿಸಬೇಕು ಎನ್ನುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular