HomeKarnatakaBIG NEWS: ಇದು ಬಿಜೆಪಿ ಷಡ್ಯಂತ್ರ: ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದ ಡಿಸಿಎಂ...

BIG NEWS: ಇದು ಬಿಜೆಪಿ ಷಡ್ಯಂತ್ರ: ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಅವರು ಯಾವುದೇ ಹಗರಣದಲ್ಲೂ ಭಾಗಿಯಾಗಿಲ್ಲ. ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಯಾವುದೇ ತನಿಖೆ ನಡೆದರೂ ಅವರು ದೋಷಮುಕ್ತರಾಗುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮುಡಾ ಪ್ರಕರಣದಲ್ಲಿ ಸಿಎಂ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಪ್ರತಿಕ್ರಿಯಿಸಿ, ಬಿಜೆಪಿಯವರು ನನ್ನ ಮೇಲೆ ಹೇಗೆ ಷಡ್ಯಂತ್ರ ರೂಪಿಸಿ ಕೇಸ್ ದಾಖಲಿಸಿ, ಜೈಲಿಗೆ ಹಾಕಿದರೋ ಅದೇ ರೀತಿ ನಮ್ಮ ಮುಖ್ಯಮಂತ್ರಿಗಳ ವಿರುದ್ಧವೂ ಷಡ್ಯಂತ್ರ ರೂಪಿಸುತ್ತಿದ್ದಾರೆ. ಭಗವಂತನ ಕೃಪೆಯಿಂದ ನಾನು ಜೈಲಿಗೆ ಹೋದ ಪ್ರಕರಣ ಕೂಡ ವಜಾಗೊಂಡಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ. ನಾವೆಲ್ಲರೂ ಮುಖ್ಯಮಂತ್ರಿಗಳ ಜತೆಗೆ ನಿಲ್ಲುತ್ತೇವೆ. ಹೋರಾಟ ಮುಂದುವರಿಸುತ್ತೇವೆ. ಅವರು ಮಾಡಿರುವ ಕೆಲಸ, ರಾಜ್ಯದ ಜನರಿಗೆ ನೀಡಿರುವ ಯೋಜನೆಯನ್ನು ಬಿಜೆಪಿಯವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ. ನಮಗೆ ಈ ನೆಲದ ಕಾನೂನಿನ ಮೇಲೆ ಗೌರವವಿದೆ. ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular